ಸಂಜೆಯೊಳಗೆ ಸ್ಪೀಕರ್ ಮುಂದೆ ಖುದ್ದು ಹಾಜರಾಗಿ- ಅತೃಪ್ತ ಶಾಸಕರಿಗೆ ಸುಪ್ರೀಂಕೋರ್ಟ್ ಸೂಚನೆ… ನವದೆಹಲಿ,ಜು,11,2019(..): ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ತಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಳಂಬ ಮಾಡುತ್ತಿರುವುದನ್ನ ಪ್ರಶ್ನಿಸಿ ಸ್ಪೀಕರ್ ವಿರುದ್ದ 13 ಮಂದಿ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಅತೃಪ್ತ ಶಾಸಕರು ಖುದ್ದು ಸ್ಪೀಕರ್ ಮುಂದೆ ಸಂಜೆ 6 ಗಂಟೆಯೊಳಗೆ ಹಾಜರಾಗಬೇಕು ಎಂದು ಸೂಚನೆ ನೀಡಿ ನಾಳೆಗೆ ವಿಚಾರಣೆಯನ್ನ ಮುಂದೂಡಿದೆ. ಅತೃಪ್ತ ಶಾಸಕರಿಗೆ ಭದ್ರತೆ ನೀಡುವಂತೆ ಸುಪ್ರೀಂಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆ ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಸ್ ಬರಲು ಸಜ್ಜಾಗಿದ್ದಾರೆ ಎನ್ನಲಾಗಿದೆ. : – –- - –