ಮೈಸೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು…. ಮೈಸೂರು,ಜು,8,2019(..): ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಅರಸು ರಸ್ತೆ – ಮಹಾರಾಣಿ ಕಲಾ ಕಾಲೇಜು ವೃತ್ತದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. : –- - - .