ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್. ನಾಗೇಶ್… ಬೆಂಗಳೂರು,ಜು,8,2019(..): ಸಚಿವರಾಗಿ ಇತ್ತೀಚೆಗಷ್ಟೆ ಪ್ರಮಾಣವಚನ ಸ್ವೀಕರಿಸಿದ್ದ ಮುಳುಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ಹೆಚ್. ನಾಗೇಶ್ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಕ್ಷೇತರ ಶಾಸಕರಾದ ಹೆಚ್. ನಾಗೇಶ್ ಮತ್ತು ಶಂಕರ್ ಜೂನ್ 14 ರಂದು ಸಮ್ಮಿಶ್ರ ಸರ್ಕಾರದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ನಡುವೆ 13 ಮಂದಿ ಅತೃಪ್ತ ಶಾಸಕರು ಮೈತ್ರಿ ಸರ್ಕಾರದ ವಿರುದ್ದ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನು ತಮ್ಮ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ಹೆಚ್. ನಾಗೇಶ್ ಮೈತ್ರಿ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸಚಿವ ಸ್ಥಾನಕ್ಕೆ ಹೆಚ್. ನಾಗೇಶ್ ರಾಜೀನಾಮೆ ನೀಡಿದ್ದು, ಮುಂಬೈ ಹೋಟೆಲ್ ಗೆ ತೆರಳಿ ಅತೃಪ್ತ ಶಾಸಕರ ಜತೆ ಸೇರಲಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. : - – –