ಬಿಜೆಪಿಗೆ ‘ರಿವರ್ಸ್ ಆಪರೇಷನ್’ ಭಯ: ಶಾಸಕರನ್ನು ರೆಸಾರ್ಟ್’ಗೆ ಕರೆದೊಯ್ಯಲು ಸಿದ್ಧತೆ ಬೆಂಗಳೂರು, ಜುಲೈ 07, 2019 (..): ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ‘ರಿವರ್ಸ್ ಆಪರೇಷನ್’ ಮಾಡಬಹುದು ಎಂಬ ಭೀತಿ ಬಿಜೆಪಿ ಮುಖಂಡರನ್ನು ಕಾಡುತ್ತಿದೆ ಎನ್ನಲಾಗಿದೆ. ಹೀಗಾಗಿ ಪಕ್ಷದ ಪಾದಾಧಿಕಾರಿಗಳು ತಮ್ಮ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸುವ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಬಿಜೆಪಿಯ 30 ಕ್ಕೂ ಹೆಚ್ಚು ಶಾಸಕರು ರಿವರ್ಸ್ ಆಪರೇಷನ್ ಗೆ ಒಳಗಾಗುವ ಸಾಧ್ಯತೆ ಇದ್ದು, ಇವರನ್ನು ಮಾತ್ರವೇ ರೆಸಾರ್ಟ್ ಗೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ನ 14 ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಜೆಡಿಎಸ್ ಮುಖಂಡರು ರಿವರ್ಸ್ ಆಪರೇಷನ್ ಮಾಡಬಹುದು ಎಂದು ಹೇಳಲಾಗುತ್ತಿದೆ.