ಅತೃಪ್ತ ಶಾಸಕರ ರಾಜೀನಾಮೆ ಹಿಂದೆ ನಮ್ಮ ಕೈವಾಡವಿಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ… ಬೆಂಗಳೂರು,ಜು,6,2019(..): ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ಹಿಂದೆ ನಮ್ಮ ಕೈವಾಡವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 13 ಮಂದಿ ಅತೃಪ್ತ ಶಾಸಕರು ಇಂದು ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯ ರಾಜಕೀಯ ಬೆಳವಣಿಗೆಯನ್ನ ಗಮನಿಸುತ್ತಿದ್ದೇನೆ. ಶಾಸಕರ ರಾಜೀನಾಮೆ ವಿಚಾರಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ತಿಳಿಸಿದರು. ಅತೃಪ್ತ ಶಾಸಕರ ರಾಜೀನಾಮೆ ಸ್ವೀಕಾರದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ರಾಜ್ಯದ ರಾಜಕೀಯ ಬೆಳವಣಿಗೆ ಕಾಯುತ್ತೇವೆ ಎಂದು ಹೇಳಿದರು. : –- - -