ಜೆಡಿಎಸ್ ಸೇರುವ ಬಗ್ಗೆ ವದಂತಿ ಹಿನ್ನೆಲೆ; ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ… ಕೊಪ್ಪಳ,ಜು,6,2019(..): ಜೆಡಿಎಸ್ ಸೇರುತ್ತಾರೆಂಬ ವದಂತಿ ಹಬ್ಬಿದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸುಗೂರು, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಬಸವರಾಜ ದಡೇಸುಗೂರು, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ಈ ಹೊತ್ತಿನ ವರೆಗೂ ಬಿಜೆಪಿ ಪಕ್ಷದಲ್ಲಿ ಇದ್ದೇನೆ. ಮುಂದೆ ಏನಾಗುತ್ತದೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಬಸವರಾಜ ಡಡೇಸುಗೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ, ಈ ಕುರಿತು ಪ್ರತಿಕ್ರಿಯಿಸಿ. ನನಗೆ ಯಾವುದೇ ಪಕ್ಷದಿಂದಲೂ ಆಫರ್ ಬಂದಿಲ್ಲ. ನಾನು ಇವತ್ತಿನ ವಿಚಾರ ಮಾತ್ರ ಹೇಳುತ್ತಿದ್ದೇನೆ. ಮುಂದೆ ಏನಾಗುತ್ತದೆ ಗೊತ್ತಿಲ್ಲ ಎಂದರು. : – –--