ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಪದಗ್ರಹಣ: ನಿಖಿಲ್ ಕುಮಾರಸ್ವಾಮಿಗೆ ಯುವಘಟಕ ರಾಜ್ಯಾಧ್ಯಕ್ಷ ಪಟ್ಟ… ಬೆಂಗಳೂರು,ಜು,4,2019(..): ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರಾಗಿ ಸಕಲೇಶಪುರದ ಜೆಡಿಎಸ್ ಶಾಸಕ ಹೆಚ್.ಕೆ ಕುಮಾರಸ್ವಾಮಿ ಅವರನ್ನ ನೇಮಕ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಅವರ ಹೆಸರನ್ನ ಘೋಷಣೆ ಮಾಡಿದರು. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧುಬಂಗಾರಪ್ಪ, ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಪದಗ್ರಹಣ ಮಾಡಿದರು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಶಾಸಕ ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಆದರೆ ಹೆಚ್.ವಿಶ್ವನಾಥ್ ಅವರನ್ನೇ ಜೆಡಿಎಸ್ ಅಧ್ಯಕ್ಷರಾಗಿ ಮುಂದುವರೆಯುವಂತೆ ಜೆಡಿಎಸ್ ನಾಯಕರು ಎಷ್ಟೇ ಮನವೊಲಿಸಿದರೂ ಹೆಚ್.ವಿಶ್ವನಾಥ್ ತಮ್ಮ ನಿರ್ಧಾರದ ಬದಲಿಸಿಕೊಳ್ಳಲಿಲ್ಲ. ಹೀಗಾಗಿ ಹೆಚ್. ವಿಶ್ವನಾಥ್ ರಿಂದ ತೆರವಾಗಿದ್ದ ಸ್ಥಾನಕ್ಕೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. : –- -