ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು… ತುಮಕೂರು,ಜು,4,2019(..): ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲ್ಲೂಕಿನ ಮಲ್ಲಸಂದ್ರ ಬಳಿ ಈ ಘಟನೆ ನಡೆದಿದೆ. ಆಟೋದಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –-- -