ಜವರಾಯನ ಅಟ್ಟಹಾಸ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಡಿಕ್ಕಿಯಾಗಿ 11 ಮಂದಿ ಸ್ಥಳದಲ್ಲೇ ದುರ್ಮರಣ… ಚಿಕ್ಕಬಳ್ಳಾಪುರ,ಜು,3,2019(..): ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 11 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕು ಮುರುಗಮಲ್ಲ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುರುಗಮಲ್ಲ ಕಡೆಯಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಚಿಂತಾಮಣಿಯಿಂದ ಮುರುಗಮಲ್ಲ ಕಡೆ ತೆರಳುತ್ತಿದ್ದ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನ ಕೋಲಾರ ಮತ್ತು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಘಟನೆ ನಡೆದಿದೆ. : -11 - – - –