ಬಂಡವಾಳ ಆಕರ್ಷಿಸುವಲ್ಲಿ ಮೊದಲ ರಾಜ್ಯವೆಂಬ ಹೆಗ್ಗಳಿಕೆ ನಮ್ಮದು- ಆಮೆರಿಕಾದಲ್ಲಿ ಹೂಡಿಕೆದಾರರ ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ … ವಾಷಿಂಗ್ಟನ್ ಡಿಸಿ,ಜು,3,2019(..): ಕೈಗಾರಿಕಾ ವಲಯದಲ್ಲಿ ಭಾರತದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ಭಾರತೀಯ ಹಾಗೂ ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣವಾಗಿ ರೂಪುಗೊಂಡಿದ್ದು, ಸತತ ಮೂರನೇ ವರ್ಷ ಬಂಡವಾಳ ಆಕರ್ಷಿಸುವಲ್ಲಿ ಮೊದಲ ರಾಜ್ಯವೆಂದು ಮನ್ನಣೆ ಪಡೆದಿದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಅಮೆರಿಕಾದ ವಾಷಿಂಗ್ಟನ್ ಡಿಸಿ ಬಳಿ ಇಂದು ಏರ್ಪಡಿಸಲಾಗಿದ್ದ ಹೂಡಿಕೆದಾರರ ಸಭೆಯಲ್ಲಿ ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾನು ಅಮೆರಿಕಾದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಆಗಮಿಸಿದ್ದರೂ, ಈ ಅವಕಾಶ ಬಳಸಿಕೊಂಡು ಹೂಡಿಕೆದಾರರನ್ನು ಭೇಟಿಯಾಗಿ ಕರ್ನಾಟಕದಲ್ಲಿನ ಹೂಡಿಕೆಯ ಅವಕಾಶಗಳ ಕುರಿತು ಬೆಳಕು ಚೆಲ್ಲುವ ಉದ್ದೇಶದಿಂದ ಈ ಸಭೆಯನ್ನು ಏರ್ಪಡಿಸಲಾಗಿದೆ. ಕೈಗಾರಿಕಾ ವಲಯದಲ್ಲಿ ಭಾರತದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ಭಾರತೀಯ ಹಾಗೂ ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣವಾಗಿ ರೂಪುಗೊಂಡಿದ್ದು, ಸತತ ಮೂರನೇ ವರ್ಷ ಬಂಡವಾಳ ಆಕರ್ಷಿಸುವಲ್ಲಿ ಮೊದಲ ರಾಜ್ಯವೆಂದು ಮನ್ನಣೆ ಪಡೆದಿದೆ. ರಾಜ್ಯದ ರಾಜಧಾನಿ ಬೆಂಗಳೂರನ್ನು ಇತ್ತೀಚೆಗೆ ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರವೆಂದು ಗುರುತಿಸಲಾಗಿದೆ. ಇಲ್ಲಿನ ಕ್ರಿಯಾಶೀಲ, ಉದ್ಯಮ ಸ್ನೇಹಿ ನೀತಿಗಳು, ಅತ್ಯುತ್ತಮ ಮೂಲಸೌಕರ್ಯಗಳು, ಪರಿಣತ ಮಾನವಸಂಪನ್ಮೂಲ ಹಾಗೂ ನೂತನ ಆವಿಷ್ಕಾರ ಮತ್ತು ಅಭಿವೃದ್ಧಿಗೆ ಪೂರಕ ವಾತಾವರಣ, ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಕಾರಣವಾಗಿದೆ. ಈ ಕಾರಣಕ್ಕಾಗಿಯೇ ದೇಶದ ಜಿಡಿಪಿ 7.2 ರಷ್ಟಿದ್ದರೆ, ರಾಜ್ಯದ ಜಿಡಿಪಿ ಶೇ. 10 ರಷ್ಟಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಭಾಷಣ ಈ ಕೆಳಕಂಡಂತಿದೆ. : – – -