ನಂಬಿಕೆ, ಧರ್ಮದ ಮೇಲೆ ಹಸ್ತಕ್ಷೇಪ: ಚಿತ್ರರಂಗಕ್ಕೆ ಗುಡ್ ಬೈ ಹೇಳಲು ‘ದಂಗಲ್’ ನಟಿ ನಿರ್ಧಾರ ಬೆಂಗಳೂರು, ಜುಲೈ 01, 2019 (..):ನಟಿ ಝೈರಾ ವಾಸಿಂ ಚಿತ್ರರಂಗಕ್ಕೆ ಗುಡ್ ಬೈ ಹೇಳುವ ನಿರ್ಧಾರ ಮಾಡಿದ್ದಾರೆ. ಆಮೀರ್ ಖಾನ್ ಅಭಿನಯದ ಸೂಪರ್ ಹಿಟ್ ‘ದಂಗಲ್’ ಚಿತ್ರದ ಮೂಲಕ ಬಾಲಿವುಡ್ ಗೆ ಕಾಲಿಟ್ಟ ಝೈರಾ ‘ದಂಗಲ್’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸುಮಾರು ಐದು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದ ಕಾಶ್ಮಿರಿ ಮೂಲದ ಝೈರಾ ಚಿತ್ರರಂಕ್ಕೆ ಗುಡ್ ಬೈ ಹೇಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಚಿತ್ರ ಜಗತ್ತು ನನಗೆ ಸಂತಸ ತಂದಿಲ್ಲ. ನಂಬಿಕೆ ಹಾಗೂ ಧರ್ಮದ ಮೇಲೆ ಹಸ್ತಕ್ಷೇಪ ಮಾಡುತ್ತದೆ. ಈ ಕಾರಣದಿಂದ ನಾನು ಚಿತ್ರರಂಗ ತೊರಿಯುವ ನಿರ್ಧಾರ ಮಾಡಿದ್ದೀನಿ ಎಂದು ಬರೆದುಕೊಂಡಿದ್ದಾರೆ.