ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಶುರು…. ಮೈಸೂರು,ಜು,1,2019(..) ಹಲವುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು,ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಶುರುವಾಗಿದೆ. ವಿಷ್ಣು ಸ್ಮಾರಕ ವಿವಾದಕ್ಕೆ ಹೈಕೋರ್ಟ್ ಅಂತಿಮ ತೆರೆ ಎಳೆದ ಹಿನ್ನೆಲೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ತಹಸೀಲ್ದಾರ್, ಪೊಲೀಸ್ ಬಂದೋಬಸ್ತ್ ಸಮ್ಮುಖದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಮೈಸೂರು ಉದ್ಬೂರಿನ ಹಾಳಾಲು ಗ್ರಾಮದಲ್ಲಿ ಮೈಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆ ಪಕ್ಕದಲ್ಲಿ ಸ್ಮಾರಕ ಸ್ಥಳ ಇದೆ. ಮೊದಲಿಗೆ 5ಎಕರೆ ಸರ್ಕಾರಿ ಜಮೀನನ್ನ ಜಿಲ್ಲಾಡಳಿತ ಕ್ಲೀನ್ ಮಾಡಿಸುತ್ತಿದ್ದು, ಜೆಸಿಬಿ, ಟ್ರಾಕ್ಟರ್ ಸಹಾಯದೊಂದಿಗೆ ಕಾಮಗಾರಿ ಆರಂಭವಾಗಿದೆ. ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಸಮಿತಿಗೆ ಜಮೀನು ಅಧಿಕೃತವಾಗಿ ಹಸ್ತಾಂತರ ಮಾಡಲಾಗಿದೆ. : . - – -- .