ಮಧ್ಯಂತರ ಚುನಾವಣೆ ಸೂಕ್ತ ಎಂಬ ಬಸವರಾಜ ಹೊರಟ್ಟಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು… ಹುಬ್ಬಳ್ಳಿ,ಜೂ,27,2019(..): ಈ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಸೂಕ್ತ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮುಖಂಡ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೆಲವರಿಗೆ ದಿವ್ಯಜ್ಞಾನ ಇರುತ್ತದೆ. ನಮಗೆ ಆ ಜ್ಞಾನ ಇಲ್ಲ. ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿ ಸಿಎಂ ಹೆಚ್.ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿಎಂ ಹೆಚ್.ಡಿ ಕುಮಾರಸ್ವಾಮಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಗೊತ್ತಿಲ್ಲದೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದರು. ಹಾಗೆಯೇ ಕಾಂಗ್ರೆಸ್ ಸೋಲಿಗೆ ಮೈತ್ರಿ ಒಂದೇ ಕಾರಣವಲ್ಲ. ಕಾಂಗ್ರೆಸ್-ಜೆಡಿಎಸ್ ಸೇರಿ ಸರ್ಕಾರ ರಚಿಸಿದ್ದೇವೆ. ಹೀಗಾಗಿ ಅಸಮಾಧಾನ ಸಹಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. : - - -