ಸ್ಟೀಲ್ ಬ್ರಿಡ್ಜ್ ಯೋಜನೆ ಕೈ ಬಿಟ್ಟ ಬಗ್ಗೆ ಹೈಕೋರ್ಟ್ ಗೆ ಮೆಮೋ ಸಲ್ಲಿಸಿದ ರಾಜ್ಯ ಸರ್ಕಾರ.. ಬೆಂಗಳೂರು,ಜೂ,18,2019(..) ವಿವಾದಿತ ಸ್ಟೀಲ್ ಫ್ಲೈ ಓವರ್ ಯೋಜನೆ ಕೈ ಬಿಟ್ಟಿರುವ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೆಮೊ ಸಲ್ಲಿಸಿದ್ದು ಮೆಮೊ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯಾರ್ಥಪಡಿಸಿದೆ. 2016ರಲ್ಲಿ ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಇದಕ್ಕಾಗಿ ನೂರಾರು ಮರಗಳನ್ನ ಕಡಿಯಲು ಉದ್ದೇಶಿಸಲಾಗಿತ್ತು. ಇದಕ್ಕೆ ಸಾರ್ವಜನಿಕರು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪ್ರಕರಣ ಎನ್ ಜಿಟಿ ಮೆಟ್ಟಿಲೇರಿತ್ತು. ಈ ನಡುವೆ ಯೋಜನೆ ವಿರೋಧಿಸಿ ನಮ್ಮ ಬೆಂಗಳೂರು ಪ್ರತಿಷ್ಟಾನ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಇದೀಗ ರಾಜ್ಯ ಸರ್ಕಾರ ಯೋಜನೆ ಕೈ ಬಿಟ್ಟ ಬಗ್ಗೆ ಹೈಕೋರ್ಟ್ ಗೆ ಮೆಮೊ ಸಲ್ಲಿಸಿದ್ದು, ಮೆಮೋ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯಾರ್ಥಪಡಿಸಿದೆ. ಇನ್ನು ಯೋಜನೆ ಕೈ ಬಿಟ್ಟ ಬಗ್ಗೆ ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. : – – –- – -