ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ: ವಿಡಿಯೋದಲ್ಲಿ ಸಿಎಂಗೆ ಮನವಿ ಮಾಡಿ ರೈತ ಆತ್ಮಹತ್ಯೆಗೆ ಶರಣು… ಕೆ.ಆರ್ ಪೇಟೆ,ಜೂ,17,2019(..): ಸಾಲಬಾಧೆ ತಾಳಲಾರದೆ ರೈತನೋರ್ವ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ .ಕೆ.ಆರ್ ಪೇಟೆ ತಾಲ್ಲೂಕಿನ ಅಘಲಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಎ.ಎನ್ ಸುರೇಶ್ ಆತ್ಮಹತ್ಯೆಗೆ ಶರಣಾದ ರೈತ. ಸಾಲಬಾಧೆ ಹಿನ್ನೆಲೆ ಸುರೇಶ್ ವಿಡಿಯೋ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಆರ್ ಪೇಟೆಯ ಸಂತೇಬಾಚಳ್ಳಿಯ ಎಲ್ಲಾ ಕೆರೆಗಳನ್ನ ತುಂಬಿಸುವಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ವಿಡಿಯೋದಲ್ಲಿ ರೈತ ಸುರೇಶ್ ಮನವಿ ಮಾಡಿದ್ದಾರೆ. ಅಲ್ಲದೆ ತನ್ನ ಅಂತ್ಯ ಸಂಸ್ಕಾರಕ್ಕೆ ಬರುವಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನೂ ವಿಡಿಯೋ ಮೂಲಕ ಆಹ್ವಾನಿಸಿದ್ದರಂತೆ. ಅಂತ್ಯಸಂಸ್ಕಾರದ ಬಳಿಕ ಈ ವಿಡಿಯೋ ವೈರಲ್ ಆಗಿದೆ. ಕೆ.ಆರ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. : . # # # # #