ಬಿಜೆಪಿಗೆ ಬೇಕಿರುವುದು ಅಗ್ಗದ ಪ್ರಚಾರ ಹೊರತು; ಅಭಿವೃದ್ಧಿಯಲ್ಲ: ಸಿಎಂ ಕುಮಾರಸ್ವಾಮಿ ತಿರುಗೇಟು ಬೆಂಗಳೂರು:ಜೂ-16:9www..) ಜಿಂದಾಲ್ ಸೇರಿದಂತೆ ವಿವಿಧ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರ ನಿಜ ಬಣ್ಣ ಈಗ ಬಯಲಾಗಿದೆ ಎಂದು ಹೇಳಿದ್ದಾರೆ. ಟ್ವೀಟರ್ ನಲ್ಲಿ ಬರೆದಿರುವ ಸಿಎಂ ಕುಮಾರಸ್ವಾಮಿ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆಗೆ ಆಹ್ವಾನಿಸಿ ಪತ್ರವನ್ನು ಸಚಿವ ಸಂಪುಟದ ಸಹೋದ್ಯೋಗಿ ವೆಂಕಟರಾವ್ ನಾಡಗೌಡ ಅವರ ಮೂಲಕ ಮಾನ್ಯ ವಿರೋಧಪಕ್ಷದ ನಾಯಕರಿಗೆ ಕಳುಹಿಸಿದ್ದೆ. ಅವರು ಚರ್ಚೆಗೆ ಸಮಯ ಕೋರಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ. ಅವರಿಗೆ ಬೇಕಿರುವುದು ಕೇವಲ ಅಗ್ಗದ ಪ್ರಚಾರ, ಅಭಿವೃದ್ಧಿ ಆಧಾರಿತ ಚರ್ಚೆಯಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಾಯಕರನ್ನು ಈಗಾಗಲೇ ಪೊಲಿಸರು ತಡೆದಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ಸಿಎಂ ಕುಮಾರಸ್ವಾಮಿ, ಸದ್ಯ ತಾಜ್ ಹೋಟೆಲ್​ನಲ್ಲಿ ತಂಗಿದ್ದು, ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಹೋಟೆಲ್ ಬಳಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. , , ,