ಮಾಜಿ ಶಾಸಕರ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಕ್ಕೇ ಸಾವು… ಬೆಳಗಾವಿ,ಜೂ,15,2019(..): ಮಾಜಿ ಶಾಸಕ ಅರವಿಂದ ಪಾಟೀಲ್ ಅವರ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಯಭಾಗ ತಾಲ್ಲೂಕಿನ ಮಾಡಲಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಡಲಗಿ ಗ್ರಾಮದ ನಿವಾಸಿ ರಾಮುನಾಯಕ ಮೃತ ಬೈಕ್ ಸವಾರ. ಇನ್ನು ಬೈಕ್ ಹಿಂಬದಿ ಕುಳಿತಿದ್ದ ಪ್ರಭಾವತಿ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಶಾಸಕ ಅರವಿಂದ ಪಾಟೀಲ್ ಅವರು ತಮ್ಮ ಪತ್ನಿಯೊಂದಿಗೆ ಕಾರ್ಯಕ್ರಮ ನಿಮಿತ್ತ ರಾಯಭಾಗಕ್ಕೆ ತೆರಳಿ ವಾಪಸ್ಸಾಗುತ್ತಿದ್ದರು. ಈ ವೇಳೆ ಕಾರು ಬೈಕ್ ಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ರಾಯಭಾಗ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. : - – - – .