ಸರ್ಕಾರಿ ಭರವಸೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಶಾಸಕ ರಾಜೀನಾಮೆ… ಬೆಂಗಳೂರು,ಜೂ,15,2019(..): ಸರ್ಕಾರಿ ಭರವಸೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕರಾಗಿರುವ ಎ.ಟಿ ರಾಮಸ್ವಾಮಿ ಇಂದು ವಿಧಾನಸಭೆ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಭೂಕಬಳಿಕೆ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆ ಸರ್ಕಾರಿ ಭರವಸೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. : - – - -