ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಕೆ.ಎಸ್‌.ಆರ್‌.ಟಿ.ಸಿ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆ ಯತ್ನ.. ಮೈಸೂರು,ಜೂ,14,2019(..): ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಕೆ.ಎಸ್‌.ಆರ್‌.ಟಿ.ಸಿ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬಸವರಾಜು ಆತ್ಮಹತ್ಯೆಗೆ ಯತ್ನಿಸಿದ ಕೆ.ಎಸ್‌ಆರ್‌ಟಿಸಿ ವೋಲ್ವೊ ಬಸ್ ಚಾಲಕ. ಬಸವರಾಜು ಅವರು ಬನ್ನಿಮಂಟಪ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ನಡುವೆ ಮೇಲಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ಚಾಲಕ ಬಸವರಾಜು ಡೆತ್ ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಿದ್ರಾಹೀನಾ ಸ್ಥಿತಿಯಲ್ಲಿದ್ದ ಬಸವರಾಜು ಅವರನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. : - –- - -