ಜಲ ಸಂರಕ್ಷಣೆ ಹಾಗೂ ಜಾಗೃತಿ ಕಾರ್ಯಕ್ರಮ ರೂಪಿಸಿ- ಸಭೆಯಲ್ಲಿ ಡಿಸಿ ಮತ್ತು ಜಿ.ಪಂ ಸಿಇಓಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ.. ಬೆಂಗಳೂರು, ಜೂ,12,2019(..): ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಹಲವು ಸೂಚನೆ, ಸಲಹೆಗಳನ್ನ ನೀಡಿದರು. ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೀಡಿದ ಸೂಚನೆಗಳು ಈ ಕೆಳಕಂಡಂತಿವೆ. 13.ಸರ್ಕಾರಿ ಶಾಲೆ, ಆಟದ ಮೈದಾನ, ಸ್ಮಶಾನ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲುಸರ್ಕಾರಕ್ಕೆ ಮುಂದಿನ ಹತ್ತು ವರ್ಷಗಳ ಅವಧಿಗೆ ಅಗತ್ಯವಿರುವ ಜಮೀನನ್ನು ಈಗಲೇ ನಿಗದಿಪಡಿಸಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ. 14.ಈ ವರ್ಷ ಜಲವರ್ಷವೆಂದು ಘೋಷಿಸಲಾಗಿದೆ. ಗ್ರಾಮಗಳಲ್ಲಿ ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಸ್ವಚ್ಛಮೇವ ಜಯತೆ ಕಾರ್ಯಕ್ರಮದಡಿ ಘನತಾಜ್ಯ ವಿಲೇವಾರಿಯನ್ನು ಅಕ್ಟೊಬರ್ ಮಾಹೆಯೊಳಗೆ ಅನುಷ್ಠಾನಕ್ಕೆ ಸೂಚನೆ.ನಿಗದಿತ ಗುರಿ ಮುಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. 15.ಜಲಾಮೃತ ಯೋಜನೆಯಡಿ ರೈತರ ಸಹಭಾಗಿತ್ವದಲ್ಲಿ ಕೆರೆಗಳ ಹೂಳೆತ್ತಲು ಯಂತ್ರದ ವೆಚ್ಚ ಭರಿಸಲು ಅವಕಾಶವಿದೆ. ಇದಕ್ಕಾಗಿ 100 ಕೋಟಿ ರೂ.ಗಳ ಅನುದಾನ ಲಭ್ಯವಿದೆ. ಹೂಳನ್ನು ರೈತರು ತೆಗೆದುಕೊಂಡು ಹೋಗಬಹುದು. ಈ ಸಂಬಂಧ ಪ್ರಸ್ತಾವನೆಗಳನ್ನು ಸಲ್ಲಿಸಲು ತಿಳಿಸಿದರು.ಈ ಹಣವನ್ನು ತಾಲ್ಲೂಕುವಾರು ಹಂಚಿಕೆ ಮಾಡು ವ ಬಗ್ಗೆ ಪರಿಶೀಲಿಸಲಾಗುವುದು. 17.ಜೂನ್ 20 ರೊಳಗೆ ಗ್ರಾಮ ಪಂಚಾಯಿತಿ ಕ್ರಿಯಾಯೋಜನೆಗಳನ್ನು ಸಲ್ಲಿಸಲು ಗಡುವು. 18.ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಗುಣಮಟ್ಟದ ತರಬೇತಿ ನೀಡಲು ನಿರ್ದೇಶನ 19.ಸಮಾಜ ಕಲ್ಯಾಣ ಇಲಾಖೆಯಡಿ ನಿಗದಿತ ಸಂಖ್ಯೆಗೆ ಸೀಮಿತವಾಗಿ ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಒಟ್ಟು 1860 ವಿದ್ಯಾರ್ಥಿ ನಿಲಯಗಳಿದ್ದು, ಈ ಪೈಕಿ 1525 ಸ್ವಂತ ಕಟ್ಟಡದಲ್ಲಿ ನಡೆಯುತ್ತಿದೆ. 342 ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡಕ್ಕೆ ನಿವೇಶನ ಗುರುತಿಸಲು ಹಾಗೂ ಮುಂದಿನ 2 ವರ್ಷಗಳಲ್ಲಿ’ ಸಿ’ ವರ್ಗದಲ್ಲಿರುವ ವಿದ್ಯಾರ್ಥಿನಿಲಯಗಳನ್ನು ‘ಎ’ ವರ್ಗಕ್ಕೆ ತರಲು ಸೂಚನೆ. 20.ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ವಿದ್ಯುದೀಕರಣಕ್ಕೆ ಎಸ್ಕಾಂ ಗಳಲ್ಲಿ 11200 ಪ್ರಕರಣಗಳು ಬಾಕಿ ಇವೆ. ಅಧಿಕಾರಿಗಳು ಸಭೆಗೆ ನೀಡಿರುವ ಮಾಹಿತಿಗೂ ಎಸ್ಕಾಂ ನೀಡಿದ ಮಾಹಿತಿಗೂ ವ್ಯತ್ಯಾಸವಿದೆ. ಎಲ್ಲ ಜಿಲ್ಲಾಧಿಕಾರಿಗಳು ಈ ಅಂಕಿಅಂಶಗಳನ್ನು ಜೂನ್ 20 ರೊಳಗೆ ಮರುಪರಿಶೀಲಿಸಿ ಸಲ್ಲಿಸಲು ಸೂಚನೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ: ಜಿ.ಪರಮೇಶ್ವರ್, ಕಂದಾಯ ಸಚಿವ ಆರ್. ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ, ತೋಟಗಾರಿಕಾ ಸಚಿವ ಮನಗೂಳಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ವಸತಿ ಸಚಿವ ಎಂ.ಟಿ.ಬಿ.ನಾಗರಾಜ್, ಆರೋಗ್ಯ ಸಚಿವ ಶಿವಾನಂದ್,ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಆಹಾರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ , ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು. : . # # # # # #