ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಸಭೆ: ದೆಹಲಿಗೆ ಬರುವಂತೆ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಲಾವ್ ನವದೆಹಲಿ,ಜೂ,12,2019(..): ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಇಂದು ಮಹತ್ವದ ಸಭೆ ನಡೆಯಲ್ಲಿದ್ದು ಈ ಹಿನ್ನೆಲೆ ದೆಹಲಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದಾರೆ. ನವದೆಹಲಿಯಲ್ಲಿ ಇಂದು ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಹೀಗಾಗಿ ದೆಹಲಿಗೆ ಬರುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಲಾವ್ ನೀಡಲಾಗಿತ್ತು. ಈಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದಾರೆ. ಎರಡು ಅಥವಾ ಮೂರು ಜನ ಎಐಸಿಸಿ ಕಾರ್ಯಾಧ್ಯಕ್ಷರನ್ನ ನೇಮಕ ಮಾಡಲು ಚಿಂತನೆ ನಡೆಸಲಾಗಿದ್ದು. ಈ ಸಂಬಂಧ ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. - –- –