ಎಲ್.ಕೆ.ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ: ಮಾಜಿ ಸಿಎಂ ಹೆಚ್.ಡಿಕೆ ಅಭಿನಂದನೆ. ಬೆಂಗಳೂರು,ಫೆಬ್ರವರಿ,3,2024(..):ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ.ಆಡ್ವಾಣಿ ಅವರಿಗೆ ಭಾರತ ರತ್ನಪ್ರಶಸ್ತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತರತ್ನ’ ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ಧಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರಧಾನಿಗಳಾದ ಎಲ್.ಕೆ.ಆಡ್ವಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅತ್ಯುನ್ನತ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಗುರುತಿಸಿ ಪುರಸ್ಕಾರ ಘೋಷಿಸಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಅಭಿವಂದನೆಗಳು ಎಂದು ತಿಳಿಸಿದ್ದಾರೆ. ಭಾರತೀಯ ರಾಜಕಾರಣದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಶೀಲತೆ ಹಾಗೂ ಕಠಿಣ ಪರಿಶ್ರಮಕ್ಕೆ ಅನ್ವರ್ಥವಾದ ಆಡ್ವಾಣಿ ಅವರು ಎಲ್ಲರಿಗೂ ಪ್ರೇರಣೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. : – - - -..