ಸಿದ್ದರಾಮಯ್ಯ ವಿರುದ್ದ ರಾಹುಲ್ ಗಾಂಧಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ದೂರು..? ಬೆಂಗಳೂರು,ಜೂ,11,2019(..): ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯಲು ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ. ಸಿದ್ದರಾಮಯ್ಯ ನಿಲುವಿನಿಂದ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಗೆ ಹಿನ್ನಡೆಯಾಗಿದೆ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಹಾಗೆಯೇ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಜತೆಯೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಚರ್ಚೆ ನಡೆಸಿದ್ದಾರೆ. : # # # # #