ಕುಳಿತಿದ್ದ ಯುವಕನ ಮೇಲೆ ಹಲ್ಲೆ: ಚಿನ್ನದ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು… ಮೈಸೂರು,ಜೂ,11,2019(..): ಕುಳಿತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ ಯುವಕನ ಬಳಿ ಇದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೂಟಗಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಿವ ಹಲ್ಲೆಗೊಳಗಾದ ಯುವಕ. ಕುಳಿತಿದ್ದ ಶಿವು ಎಂಬ ಯುವಕನ ಮೇಲೆ ದುಷ್ಕರ್ಮಿಗಳ ಗುಂಪು ಏಕಾ ಏಕಿ ದಾಳಿ ನಡೆಸಿದೆ. ಡ್ರ್ಯಾಗರ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಳಿಕ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಹಲ್ಲೆಯಿಂದ ಶಿವು ಎಂಬ ಯುವಕನಿಗೆ ಗಂಭೀರ ಗಾಯವಾಗಿದ್ದು ಶಿವುನನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- - -