ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಡಿಯೋ ಮಾಡಿಟ್ಟು ಐಎಂಎ ಜ್ಯೂವೆಲ್ಲರಿ ಮಾಲೀಕ ಮನ್ಸೂರ್ ಖಾನ್ ನಾಪತ್ತೆ… ಬೆಂಗಳೂರು, ಜೂ.10,2019(..): ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಡಿಯೋ ಮಾಡಿಟ್ಟು ಐಎಂಎ ಜ್ಯೂವೆಲ್ಲರಿ ಮಾಲೀಕ ಮಸ್ಸೂರ್ ಖಾನ್ ನಾಪತ್ತೆಯಾಗಿದ್ದು ಹೂಡಿಕೆದಾರರು ಕಂಗಾಲಾಗಿದ್ದಾರೆ. ಹಲಾಲ್ ಆದಾಯದ ಹೆಸರಿನಲ್ಲಿ ಸಾರ್ವಜನಿಕರಿಂದ ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು, ಲಾಭಾಂಶ ನೀಡುತ್ತಿದ್ದ ಐಎಂಎ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಖಾನ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ, ಆಡಿಯೋ ಮಾಡಿದ್ದು ನಗರ ಪೊಲೀಸ್ ಆಯುಕ್ತರಿಗೆ ಕಳುಹಿಸಿರುವ ಆಡಿಯೋ ಸಂದೇಶ ವೈರಲ್ ಆಗಿದೆ. ಆಡಿಯೋದಲ್ಲೇನಿದೆ… ಆಡಿಯೋದಲ್ಲಿ ಮಾತನಾಡಿರುವ ಮನ್ಸೂರ್ ಖಾನ್ ”ಈ ಸಂದೇಶವನ್ನು ನೀವು ಕೇಳುವ ವೇಳೆಗೆ ನಾನು ನನ್ನ ಜೀವನವನ್ನು ಅಂತ್ಯಗೊಳಿಸಿರುತ್ತೇನೆ. 12-13 ವರ್ಷಗಳಲ್ಲಿ ನಾನು ಸಂಸ್ಥೆಯನ್ನು ಕಟ್ಟಲು ಬಹಳಷ್ಟು ಶ್ರಮ ಪಟ್ಟಿದ್ದೇನೆ. ಆದರೆ, ಅಧಿಕಾರಿಗಳು, ರಾಜಕಾರಣಿಗಳು, ಎಲ್ಲರಿಗೂ ಲಂಚ ನೀಡಿ, ನೀಡಿ ಸಾಕಾಗಿ ಹೋಗಿದೆ. ಶಿವಾಜಿನಗರದ ಶಾಸಕರ‌ ಬಳಿ 400 ಕೋಟಿ ರೂ ನೀಡಿದ್ದೆ. ಆದರೆ ಅವರು ವಾಪಸ್ ನೀಡಿಲ್ಲ. ಅವರಿಂದ ನನಗೆ ವಂಚನೆಯಾಗಿದೆ. ನನಗೆ ಹಣ ವಾಪಸ್ ಮಾಡುವ ಬದಲು ರೌಡಿಗಳನ್ನ ನಮ್ಮ ಆಫೀಸ್ ಗೆ ಕಳುಹಿಸುತ್ತಿದ್ದರು ಎಂದು ಹೇಳಿದ್ದಾನೆ. ನನ್ನ ಕುಟುಂಬಕ್ಕೆ ಪ್ರಾಣಾಪಾಯವಿದೆ. ಈ ಆಡಿಯೋ ನಿಮಗೆ ತಲುಪುವ ವರೆಗೆ ನಾನು ಇರುವುದಿಲ್ಲ. ನನ್ನ ಬಳಿ 500 ಕೋಟಿ ರೂ. ಆಸ್ತಿಯಿದೆ, ಚಿನ್ನ, ವಜ್ರ ಇದೆ. ಅದನ್ನು ಮಾರಿ ಸಂತ್ರಸ್ತ ಹೂಡಿಕೆದಾರರಿಗೆ ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಬಿಡಿಎ ಕುಮಾರ್ ಬಳಿ ನನ್ನ 5 ಕೋಟಿ ರೂ.ಇದೆ. ಶಿವಾಜಿ ನಗರದ ಶಾಸಕರ ಬಳಿ ಇರುವ ಹಣವನ್ನು ಜನರಿಗೆ ಹಂಚಿಕೆ ಮಾಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಪೊಲೀಸ್ ಆಯುಕ್ತರಿಗೆ ಬಂದಿರುವ ಆಡಿಯೋದಲ್ಲಿ ಕೋರಲಾಗಿದೆ. ಇನ್ನು ಮನ್ಸೂರ್ ಖಾನ್ ಗಾಗಿ ಪೊಲೀಸರು ಬಲೆ ಬೀಸಿದ್ದು ಇವರೆಗೆ ಮನ್ಸೂರ್ ಖಾನ್ ಎಲ್ಲಿದ್ದಾನೆ ಎಂದು ತಿಳಿದು ಬಂದಿಲ್ಲ. ಶಿವಾಜಿ ನಗರದಲ್ಲಿರುವ ಐಎಂಎ ಆಭರಣ ಮಳಿಗೆ ಸೇರಿದಂತೆ ಅವರ ಕಚೇರಿಗಳಿಗೆ ಬೀಗ ಜಡಿಯಲಾಗಿದೆ.ಆಡಿಯೋ ಸಂದೇಶದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನ ಐಎಂಎ ಕಚೇರಿ ಬಳಿ ಜಮಾಯಿಸಿದ್ದಾರೆ. : , , # # # #