ಜೂ.12 ರಂದು ನಿಗದಿಯಾಗಿದ್ದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ.. ಬೆಂಗಳೂರು, ಜೂ,10(..): ಜೂನ್ 12 ರಂದು ನಿಗದಿಯಾಗಿದ್ದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನ ಮುಂದೂಡಲಾಗಿದೆ. ಹಿರಿಯ ಸಾಹಿತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇಂದು ನಿಧನರಾದ ಹಿನ್ನೆಲೆ ರಾಜ್ಯದಲ್ಲಿ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣಝೆ ಘೋಷಣೆ ಮಾಡಲಾಗಿದೆ. ಹೀಗಾಗಿ ಶೋಕಾಚರಣೆ ಇರುವ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನ ಮಾಡುವಂತಿಲ್ಲ. ಅದ್ದರಿಂದ ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಸಚಿವ ಸಂಪುಟ ವಿಸ್ತರಣೆಯನ್ನ ಮುಂದೂಡಲಾಗಿದೆ. ಜೂನ್ 13 ಅಥವಾ ಜೂನ್ 17 ಅಥವಾ 18 ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಜೆಡಿಎಸ್ ಕೋಟಾದ 2, ಕಾಂಗ್ರೆಸ್ ಕೋಟಾದ 1 ಸೇರಿ ಒಟ್ಟು ಮೂರು ಸಚಿವ ಸ್ಥಾನಗಳು ಖಾಲಿ ಇವೆ. ಅದ್ದರಿಂದ ಕಳೆದ ಶನಿವಾರ ರಾಜ್ಯಪಾಲರನ್ನ ಭೇಟಿಯಾಗಿದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಚಿವ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸಿ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಮಾಡಿದ್ದರು. : # # # #