ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆ: ಇಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ… ಬೆಂಗಳೂರು, ಜೂ,10,2019(..): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ನಿಧನರಾದ ಹಿನ್ನೆಲೆ ಗೌರವಾರ್ಥ ಇಂದು ಒಂದು ದಿನ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಹಾಗೆಯೇ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. : ’ . ’ # # # # #