ಸರ್ಕಾರಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ : ಎರಡು ಮತ್ತು ನಾಲ್ಕನೇ ಶನಿವಾರ ರಜೆ- ಸಚಿವ ಸಂಪುಟ ಸಭೆ ಬಳಿಕ ಸಚಿವ ಕೃಷ್ಣಬೈರೇಗೌಡ ಮಾಹಿತಿ… ಬೆಂಗಳೂರು, ಜೂನ್ 06,2019(..): ರಾಜ್ಯ ಸರ್ಕಾರಿ ಗ್ರೂಪ್ ‘ಸಿ’ ಮತ್ತು ‘ಡಿ’ ದರ್ಜೆಯ ನೌಕರರ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೊಳಿಸಲು ಕರಡು ಕಾನೂನಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೃಷ್ಣೇಭೈರೇಗೌಡ ಗ್ರೂಪ್ ‘ಸಿ’ ಮತ್ತು ‘ಡಿ’ದರ್ಜೆಯ ನೌಕರರು ವರ್ಗಾವಣೆ ಸಮಯದಲ್ಲಿ ಅನೇಕ ಅನಾಕೂಲತೆಗಳನ್ನು ಎದರಿಸುತ್ತಿದ್ದಾರೆ. ಅದನ್ನು ನಿವಾರಿಸಲು ನಿಟ್ಟಿನಲ್ಲಿ ಕೌನ್ಸಲಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರ ಮೂಲಕ ಇಡೀ ರಾಜ್ಯದಲ್ಲಿ ಜಿಲ್ಲಾವಾರು ಹಾಲಿ ಖಾಲಿ ಇರುವ ಹುದ್ದೆಗಳ ಸಮಾನ ಹಂಚಿಕೆಗೆ ಅನುಕೂಲವಾಗುತ್ತದೆ.ವರ್ಗಾವಣೆ ಸಮಯದಲ್ಲಿ ವೃಂದವಾರು ಹಂಚಿಕೆ, ಕನಿಷ್ಠ ಸೇವಾವಧಿಯನ್ನು ಸಹ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದರು. ಈ ಸಂಬಂಧ ವಿಧೇಯಕವನ್ನು ಮುಂದಿನ ವಿಧಾನಮಂಡಲದಲ್ಲಿ ಮಂಡಿಸಲಾಗುತ್ತದೆ ಎಂದು ಅವರು ಹೇಳಿದರು. ಸಚಿವ ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು: : - # # # #