ಮದುವೆಗೆ ಹೋಗಿದ್ದವರು ಮಸಣಕ್ಕೆ: ಬೈಕ್, ಬಸ್ ನಡುವೆ ಡಿಕ್ಕಿಯಾಗಿ ತಾಯಿ ಮಗ ಸಾವು.. ಮೈಸೂರು,ಜೂ,5,2019(..) ಬೈಕ್ ಮತ್ತು ಬಸ್ ನಡುವೆ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಬಳಿ ಈ ಘಟನೆ ನಡೆದಿದೆ. ಸುಭದ್ರಮ್ಮ(55), ಶಿವಣ್ಣ (35) ಮೃತಪಟ್ಟವರು. ಮೃತರು ರುದ್ರಪಟ್ಟಣಕ್ಕೆ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿ ವಾಪಸ್ ಬರುವಾಗ ಬಸ್ ಬೈಕ್ ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆ, ಮೈಗೆ ತೀವ್ರ ಪೆಟ್ಟಾಗಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕೆ.ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : ’ . # # # #