ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ಗೆ ಬಂದ್ರೆ ಸಿಎಂ ಆಗಲು ಸಹಕಾರ ನೀಡ್ತೇನೆ- ಸಚಿವ ಎಂ.ಬಿ ಪಾಟೀಲ್ ವಿಜಯಪುರ,ಜೂ,5,2019(..): ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಗೆ ಬಂದರೆ ಸಿಎಂ ಆಗಲು ಸಹಕಾರ ನೀಡುತ್ತೇನೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಎಸ್ ವೈ ಸಿಎಂ ಆಗಲು ಎಂ.ಬಿ.ಪಾಟೀಲ್ ಸಹಕಾರ ನೀಡಲಿ ಎನ್ನುವ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾನು ಒಂದು ಪಕ್ಷದಲ್ಲಿದ್ದೇನೆ. ಬಿ.ಎಸ್.ಯಡಿಯೂರಪ್ಪ ಇನ್ನೊಂದು ಪಕ್ಷದಲ್ಲಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬಂದಲ್ಲಿ ಮುಖ್ಯಮಂತ್ರಿಯಾಗಲು ಸಹಾಯ ಮಾಡುತ್ತೇನೆ ಎಂದು ಟಾಂಗ್ ಕೊಟ್ಟಿದ್ದಾರೆ. ಲಿಂಗಾಯಿತರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅನ್ಯಾಯವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಬಿಜೆಪಿ ವಿರುದ್ದ ಕಿಡಿಕಾರಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ.ರವಿ ಪ್ರತಿಕ್ರಿಯಿಸಿ ಬಿಎಸ್ ವೈ ಸಿಎಂ ಆಗಲು ಎಂ.ಬಿ.ಪಾಟೀಲ್ ಸಹಕಾರ ನೀಡಲಿ ಎಂದಿದ್ದರು. : . - . # # #