ಅಸಮಾಧಾನ ಹೊರ ಹಾಕಿದ್ದ ಮಾಜಿ ಸಚಿವ ರಾಮಲಿಂಗರೆಡ್ಡಿಗೆ ಸಿಹಿಸುದ್ದಿ ನೀಡಿದ ಸಿದ್ದರಾಮಯ್ಯ ಬೆಂಗಳೂರು,ಜೂ,5,2019(..): ಹಿರಿಯರೆಂಬ ಕಾರಣಕ್ಕೆ ಸಚಿವ ಸ್ಥಾನ ನೀಡದಿದ್ದಕ್ಕೆ ಕಾಂಗ್ರೆಸ್ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ್ದ ಮಾಜಿ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಸಚಿವ ಸಂಪುಟ ಪುನರಚನೆ ವೇಳೆ ರಾಮಲಿಂಗರೆಡ್ಡಿ ಅವರಿಗೆ ಅವಕಾಶ ಸಿಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಮಲಿಂಗರೆಡ್ಡಿ ಅವರ ಜತೆ ನಾನು ಮಾತನಾಡುತ್ತೇನೆ. ಸಿ.ಎಸ್ ಶಿವಳ್ಳಿ ಅವರ ನಿಧನದಿಂದ ತೆರವಾದ ಸಚಿವ ಸ್ಥಾನ ಖಾಲಿ ಇದೆ. ಒಂದು ಸಚಿವ ಸ್ಥಾನ ಮಾತ್ರ ಖಾಲಿ ಇದ್ದು, ಸಂಪುಟ ಪುನರಚನೆ ವೇಳೆ ರಾಮಲಿಂಗರೆಡ್ಡಿ ಅವರಿಗೆ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಇನ್ನು ದಲಿತರ ಮೇಲೆ ಕಾಳಜಿ ಇದ್ದರೇ ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡಿ ತೋರಿಸಿ ಎಂದು ಸವಾಲು ಹಾಕಿದ ಬಿಜೆಪಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಖರ್ಗೆ ಅವರನ್ನ ಸಿಎಂ ಮಾಡಬೇಡಿ ಅಂತಾ ಯಾರು ಹೇಳಿದ್ದಾರೆ. ಖರ್ಗೆ, ಪರಮೇಶ್ವರ್‌ ಸಿಎಂ ಆಗಲಿ ಯಾರು ಬೇಡ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೆಚ್.ವಿಶ್ವನಾಥ್ ನಮ್ಮ ಪಕ್ಷದವರಲ್ಲ. ಹೀಗಾಗಿ ಅವರ ಬಗ್ಗೆ ನಾನು ಮಾತನಾಡಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. : . # # # .