ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು… ಕೊಡಗು,ಜೂ,5,2019(..): ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾನಗರದ ಬಳಿ ಈ ಘಟನೆ ನಡೆದಿದೆ. ಆಕಾಶ್, ಗಗನ್ ಮತ್ತು ಶಶಾಂಕ್ ಮೃತಪಟ್ಟ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು ಎನ್ನಲಾಗಿದೆ. ಇಂದು ರಂಜಾನ್ ಹಬ್ಬದ ಪ್ರಯುಕ್ತ ಕಾಲೇಜಿಗೆ ರಜೆ ಇದ್ದ ಹಿನ್ನಲೆ ಮೂವರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : . # # # # #