ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು…. ಮೈಸೂರು,ಜೂ,4,2019(..): ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ. ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರದಲ್ಲಿ ಈ ಘಟನೆ ನಡೆದಿದೆ. ಜ್ಯೋತಿ(24) ಮೃತಪಟ್ಟ ನವವಿವಾಹಿತೆ. ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ನಿವಾಸಿಯಾದ ಜ್ಯೋತಿ ಎರಡು ತಿಂಗಳ ಹಿಂದೆ ಹಂಪಾಪುರದ ಉಮೇಶ್ ವಿವಾಹವಾಗಿದ್ದರು. ಉಮೇಶ್ ವೃತ್ತಿಯಲ್ಲಿ ಚಾಲಕನಾಗಿದ್ದಾನೆ. ಈ ನಡುವೆ ನೇಣುಬಿಗಿದ ಸ್ಥಿತಿಯಲ್ಲಿ ಜ್ಯೋತಿ ಶವ ಪತ್ತೆಯಾಗಿದ್ದು ತಮ್ಮ ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : . # # # #