ಮೈಸೂರು ಜಿಲ್ಲಾಡಳಿತ ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿ ಆಚರಣೆ… ಮೈಸೂರು,ಜೂ,4,2019(..): ಇಂದು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿಯನ್ನ ಮೈಸೂರು ಜಿಲ್ಲಾಡಳಿತ ವತಿಯಿಂದ ಆಚರಣೆ ಮಾಡಲಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ ಪುಷ್ಪರ್ಚನೆ ಮಾಡಿದರು. ಬಳಿಕ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆ ಅವರಣದ ಲಕ್ಷ್ಮಿ ವೆಂಕಟರಮಣ ದೇವಾಲಯದಿಂದ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಕೆ ಅರ್ ಸರ್ಕಲ್ ವರೆಗೆ ಅದ್ದೂರಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ ರಾಮದಾಸ್, ಶಾಸಕ ನಾಗೇಂದ್ರ, ಮೇಯರ್ ಪುಷ್ಪಲತಾ ಇನ್ನಿತರ ಗಣ್ಯರು ಭಾಗಿಯಾಗಿದ್ದರು. : 135th . # # # #