: ಮಂಗಳೂರು ಯೂನಿವರ್ಸಿಟಿ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ನೇಮಕ ಬೆಂಗಳೂರು, ಜೂ.03, 2019 🙁 .. ) ಮಂಗಳೂರು ವಿವಿ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ. ಕುಲಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಕಳೆದ ಡಿಸೆಂಬರ್‌ನಲ್ಲೇ ಸರ್ಕಾರಕ್ಕೆ ಮೂವರ ಹೆಸರುಗಳನ್ನು ಶಿಫಾರಸು ಮಾಡಿತ್ತು. ಅದರಲ್ಲಿ ಒಂದು ಹೆಸರನ್ನು ಸರ್ಕಾರದಿಂದ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲರು ಯಡಪಡಿತಾಯ ಅವರ ಹೆಸರನ್ನು ಅಂತಿಮಗೊಳಿಸಿ ಇಂದು ಸಂಜೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ವಿವಿ ಕುಲಪತಿ ನೇಮಕ ಸಂಬಂಧ ಶೋಧನಾ ಸಮಿತಿಗೆ 71 ಅರ್ಜಿಗಳು ಬಂದಿದ್ದು, ಮೊದಲ ಹಂತದಲ್ಲಿ 25 ಅರ್ಜಿಗಳನ್ನು ಅಂತಿಮಗೊಳಿಸಲಾಗಿತ್ತು. ಬಳಿಕ ಆ ಪಟ್ಟಿಯನ್ನು 13ಕ್ಕೆ ಇಳಿಸಿ 3 ಅಭ್ಯರ್ಥಿಗಳನ್ನು ಮಾತ್ರ ಅಂತಿಮಗಳಿಸಲಾಗಿತ್ತು. : - . .