ದೆಹಲಿಯಲ್ಲಿ ಬಸ್ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ… ನವದೆಹಲಿ, ಜೂ.3,2019(..): ಮುಂದಿನ ವಿಧಾನಸಭಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಮಹಿಳಾ ಓಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ಮಹಿಳೆಯರಿಗೆ ಬಸ್ ಮತ್ತು ಮೆಟ್ರೋದಲ್ಲಿ ಉಚಿತ ಪ್ರಯಾಣದ ಯೋಜನೆ ಘೋಷಣೆ ಮಾಡಿದ್ದಾರೆ. ರಾಜಧಾನಿ ದೆಹಲಿಯ ಮೆಟ್ರೋ ರೈಲು ಮತ್ತು ಬಸ್‍ಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಯೋಜನೆಯನ್ನ ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ಇನ್ನೊಂದು ವಾರದಲ್ಲಿ ಉಚಿತ ಪ್ರಯಾಣ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಮೆಟ್ರೋ ರೈಲು ಮತ್ತು ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಸೇವೆ ಕಲ್ಪಿಸುವುದರಿಂದ ಆಗುವ ವೆಚ್ಚವನ್ನು ದೆಹಲಿ ಸರ್ಕಾರ ಭರಿಸಲಿದೆ. ಒಂದು ತಿಂಗಳಿಗೆ ಇದರಿಂದ ಎಷ್ಟು ಖರ್ಚು ಆಗಲಿದೆ ಎಂಬ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. : # # # # #