ಪ್ರತ್ಯೇಕ ರಾಷ್ಟ್ರ ಕುರಿತು ಡಿ.ಕೆ ಸುರೇಶ್ ಹೇಳಿಕೆ: ಅದು ಅವರ ಪಕ್ಷದ ನಿರ್ಣಯ ಅಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ. ನವದೆಹಲಿ, ಫೆಬ್ರುವರಿ,2,2024(..):ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರು ಪ್ರತ್ಯೇಕ ರಾಷ್ಟ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಅವರು ವ್ಯಕ್ತಿಗತವಾಗಿ ಹೇಳಿರಬಹುದು, ಅದು ಅವರ ಪಕ್ಷದ ನಿರ್ಣಯ ಅಲ್ಲ ಎಂದು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ದೇವೇಗೌಡರು, ಯಾವ ಉದ್ದೇಶದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಈ ವಿಷಯದಲ್ಲಿ ಮಾತನಾಡುವುದು ನನಗೆ ಇಷ್ಟ ಇಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್​​. ದೇಶದಲ್ಲಿ ಸರ್ಕಾರ ನಡೆಸಿದೆ. ಅನ್ಯಾಯವಾದರೆ ನ್ಯಾಯ ಬಜೆಟ್ ಚರ್ಚೆ ವೇಳೆ ಮಾತನಾಡುತ್ತೇವೆ. ಅದರಲ್ಲೇನು ಇಲ್ಲ ಎಂದರು. ಕೃಷಿ ನೀರಾವರಿ ಬೇರೆ ಕಡೆ ಹೆಚ್ಚು ಅನುದಾನ ಕೊಡಬೇಕು ಅಂತಾ ನಾನು ಮಾತನಾಡಿದ್ದೇನೆ. ಬಹಳಷ್ಟು ಆದರೆ ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿಲ್ಲ. ಒಂದು ರಾಷ್ಟ್ರೀಯ ಪಕ್ಷದ ಸದಸ್ಯರಾಗಿ ಯಾವ ಆಯಾಮದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದರು. : - – – - .