ಗ್ರಾಮ ವಾಸ್ತವ್ಯ ಹೂಡಿ ಜನರ ಸಮಸ್ಯೆ ಆಲಿಸಿದ ಸಚಿವ ಸಾ.ರಾ ಮಹೇಶ್… ಮೈಸೂರು,ಜೂ,1,2019(..): ಪ್ರವಾಸೋದ್ಯಮ ಮತ್ತು ರೇಷ್ಮೆ‌ ಸಚಿವರಾದ ಸಾ.ರಾ.ಮಹೇಶ್ ಅವರು ಕೆ.ಆರ್.ನಗರ ತಾಲ್ಲೂಕು ಶೀಗವಾಳು ಪಂಚಾಯತಿ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮಕ್ಕೆ ಶುಕ್ರವಾರ ಭೇಟಿ ಗ್ರಾಮ ವಾಸ್ತವ್ಯ ಮಾಡಿದರು. ಗ್ರಾಮ ವಾಸ್ತವ್ಯಕ್ಕೂ ಮೊದಲು ಕುಲುಮೆಹೊಸೂರು ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿ, ನಂತರ ಬೆಟ್ಟಹಳ್ಳಿ ಗ್ರಾಮಕ್ಕೆ ಆಗಮಿಸಿದರು. ಬೆಟ್ಟಹಳ್ಳಿಯಲ್ಲಿ ಜನರಿಂದ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಮಳೆ ಬಂದ ಹಿನ್ನೆಲೆಯಲ್ಲಿ ಸಭೆಯನ್ನು ಶನಿವಾರ ಬೆಳಗ್ಗೆಗೆ ಮುಂದೂಡಲಾಯಿತು. ಗ್ರಾಮದ ಕೆಲವರ ಮನೆಗಳಿಗೆ ಭೇಟಿ ನೀಡಿದ ಸಾ.ರಾ ಮಹೇಶ್ ಗ್ರಾಮದ ಕೆಲಸಗಳ ಬಗ್ಗೆ ಆಲಿಸಿದರು. ಇದಾದ ನಂತರ ಗ್ರಾಮ ಪಂಚಾಯಿತಿ ಸದಸ್ಯರಾದ ಉಮೇಶ್ ಅವರ ಮನೆಯಲ್ಲಿ ಊಟ ಮಾಡಿ, ಅಲ್ಲೇ ವಾಸ್ತವ್ಯ ಮಾಡಿದರು. ಸಚಿವರ ಗ್ರಾಮ ವಾಸ್ತವ್ಯ ಹಾಗೂ ಜನಸ್ಪಂದನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ಅಧೀಕ್ಷಕ ಅಮಿತ್ ಸಿಂಗ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. : , . # # #