ಎತ್ತಿನಗಾಡಿ ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಸಾವು… ಹಾಸನ,ಜೂ,1,2019(..): ಎತ್ತಿನಹೊಳೆ ಕೆರೆಗೆ ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಹೊಳೇನರಸೀಪುರ ತಾಲ್ಲೂಕಿನ ಉದ್ದೂರು ಹೊಸಹಳ್ಳಿ ಕೆರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ, ಒಂದೇ ಕುಟುಂಬದ ರಾಜೇಗೌಡ(55), ಕಾಂತಮ್ಮ(45), ಸಿಂಚನಾ(6), ಗುಂಡಮ್ಮ(5) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : … # # #