ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ… ನವದೆಹಲಿ,ಜೂ,1,2019(..): ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಸಂಸದೀಯ ನಾಯಕರ ಆಯ್ಕೆ ಸಂಬಂಧ ಇಂದು ಸಂಸತ್ ಭವನದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು ಪಾಲ್ಗೊಂಡಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆಯುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮತ್ತೆ ದೇಶದಲ್ಲಿ ಅಧಿಕಾರ ಹಿಡಿದಿದೆ. 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. : # # # # #