ಆಂಧ್ರ ಮೂಲದ ಇಬ್ಬರು ಗಾಂಜಾ ಮಾರಾಟಗಾರರು ಅರೆಸ್ಟ್.. ಬೆಂಗಳೂರು,ಮೇ,30,2019(..): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸರ್ಜಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶಿವ(20) ಮತ್ತು ಶಂಕರವ್ವ ಬಂಧಿತ ಆರೋಪಿಗಳು. ಬಂಧಿತರಿಂದ 2.3 ಲಕ್ಷ ಮೌಲ್ಯದ 8 ಕೆಜಿ ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಕೇರಲಾ ತಮಿಳುನಾಡು, ಆಂಧ್ರ ಪ್ರದೇಶದಲ್ಲೂ ಜಾಲ ಹೊಂದಿದ್ದರು. ಈ ನಡುವೆ ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇವರನ್ನ ಸರ್ಜಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : . # # # # #.