ರಾಜ್ಯದ ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್… ನವದೆಹಲಿ, ಮೇ 30,2019(..): ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಮೂರು ಮಂದಿ ಸಂಸದರಿಗೆ ಸ್ಥಾನ ಖಚಿತವಾಗಿದೆ. ಡಿ.ವಿ.ಸದಾನಂದ ಗೌಡ, ಧಾರವಾಡದ ಸಂಸದ ಪ್ರಹ್ಲಾದ ಜೋಶಿ ಮತ್ತು ಬೆಳಗಾವಿ ಸಂಸದ ಸುರೇಶ್ ಅಂಗಡಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಶಿ ಮತ್ತು ಸುರೇಶ್ ಅಂಗಡಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಆಗಮಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ.ಇನ್ನು ನಮ್ಮ ರಾಜ್ಯದಿಂದಲೇ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಸಚಿವ ಸ್ಥಾನ ಕನ್ಫರ್ಮ್ ಆಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂಸದ ಡಿ.ವಿ ಸದಾನಂದ ಗೌಡ, ಅಮಿತ್ ಶಾ ಅವರು ಕರೆ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ನಿವಾಸಕ್ಕೆ ಬರುವಂತೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಕೇಂದ್ರ ಸಂಪುಟದಲ್ಲಿ ಸುಷ್ಮಾ ಸ್ವರಾಜ್, ಪ್ರಕಾಶ್ ಜಾವಡೇಕರ್, ಪಿಯೂಷ್ ಘೋಯೆಲ್, ರವಿಶಂಕರ್ ಪ್ರಸಾದ್, ನಿತಿನ್ ಗಡ್ಕರಿ, ರಾಮ್ ವಿಲಾಸ್ ಪಾಸ್ವಾನ್, ಧರ್ಮೇಂದ್ರ ಪ್ರದಾನ್, ಸ್ಮೃತಿ ಇರಾನಿ, ಜೀತೇಂದ್ರ ಸಿಂಗ್, ರಾಮದಾಸ್ ಅಠಾವಳೆ, ಆರ್.ಕೆ ಸಿಂಗ್, ಬಾಬುಲ್ ಸುಪ್ರಿಯೋ ಸೇರಿ ಹಲವು ಮಂದಿ ಸ್ಥಾನ ಪಡೆಯುವ ಸಾಧ್ಯತೆ ಇದೆ. : . # # #