ಸಿಬಿಐ, ಐಟಿ, ಇಡಿಗಳು ಈಗ ಬಿಜೆಪಿ ಅಂಗಸಂಸ್ಥೆಗಳು – ಸಿಎಂ ಸಿದ್ದರಾಮಯ್ಯ ಕಿಡಿ. ಬೆಂಗಳೂರು,ಫೆಬ್ರವರಿ,2,2024(..):ಸಿಬಿಐ, ಐಟಿ, ಇಡಿಗಳು ಈಗ ಬಿಜೆಪಿ ಅಂಗಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. : - - – - - – -