ಕಾಳಿಕಾಂಬ ದೇಗುಲಕ್ಕೆ ಭೇಟಿ: ಮಂಡ್ಯದಲ್ಲಿ ಕೃತಜ್ಞತಾ ಸಮಾವೇಶಕ್ಕೆ ಚಾಲನೆ ನೀಡಿದ ಸಂಸದೆ ಸುಮಲತಾ ಅಂಬರೀಶ್… ಮಂಡ್ಯ,ಮೇ,29,2019(..): ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಲು ಆಯೋಜಿಸಲಾಗಿರುವ ಸ್ವಾಭಿಮಾನಿ ಸಮಾವೇಶಕ್ಕೆ ಸಂಸದೆ ಸುಮಲತಾ ಅಂಬರೀಶ್ ಚಾಲನೆ ನೀಡಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಸ್ವಾಭಿಮಾನ ಸಮಾವೇಶ ನಡೆಯುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸುಮಲತಾ ಅಂಬರೀಶ್ ಅವರಿಗೆ ಪುತ್ರ ಅಭಿಷೇಕ್, ನಟರಾದ ದರ್ಶನ್, ರಾಕಿಂಗ್ ಸ್ಟಾರ್ ಯಶ್, ಸುನೀತಾ ಪುಟ್ಟಣ್ಣಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಸಮಾವೇಶಕ್ಕೆ ಆಗಮಿಸುವ ಮೊದಲು ಸಂಸದೆ ಸುಮಲತಾ ಅಂಬರೀಶ್ ಮಂಡ್ಯದ ಕಾಳಿಕಾಂಬ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪಂಚದೀಪಗಳಿಂದ ಆರತಿ ಬೆಳಗಿ ಸುಮಲತಾ ಅಂಬರೀಶ್ ಪೂಜೆ ಸಲ್ಲಿಸಿದರು. ಈ ವೇಳೆ ಪುತ್ರ ಅಭಿಷೇಕ್, ಸುನೀತಾ ಪುಟ್ಟಣ್ಣಯ್ಯ ಅವರು ಉಪಸ್ಥಿತರಿದ್ದರು. : - . # # #