ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ: ತಮ್ಮ ಪಕ್ಷದ ನಾಯಕರ ವಿರುದ್ದವೇ ‘ಕೈ’ ಮುಖಂಡರಿಂದ ದೂರು…. ಬೆಂಗಳೂರು,ಮೇ,29,2019(..): ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ ತಮ್ಮ ಪಕ್ಷದ ನಾಯಕರ ವಿರುದ್ದವೇ ಕಾಂಗ್ರೆಸ್ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಗೆ ಭೇಟಿ ನೀಡಿದ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ರನ್ನ ಭೇಟಿಯಾಗಿ ದೂರು ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ಕಾಂಗ್ರೆಸ್ ನಾಯಕರು ಬಿಜೆಪಿ ಪರ ಕೆಲಸ ಮಾಡಿದ್ದಾರೆ. ಕೆ.ಎನ್ ರಾಜಣ್ಣ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ನಾಯಕರನ್ನ ಪಕ್ಷದಿಂದ ಉಚ್ಛಾಟಿಸಬೇಕು. ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. : ’ . . # # # #