ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಪ್ರಸ್ತಾಪ ಸಿಡಬ್ಲ್ಯುಸಿ ಸಭೆಯಲ್ಲಿ ತಿರಸ್ಕಾರ.. ನವದೆಹಲಿ,ಮೇ,25,2019(..): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಪ್ರಸ್ತಾಪ ಸಿಡಬ್ಲ್ಯುಸಿ ಸಭೆಯಲ್ಲಿ ತಿರಸ್ಕರಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸೋಲಿನ ಪರಾಮರ್ಶೆ ಮಾಡಲು ಇಂದು ಸಿಡಬ್ಲ್ಯುಸಿ ಸಭೆ ನಡೆಯಿತು.ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಅವರ ರಾಜೀನಾಮೆ ಪ್ರಸ್ತಾಪವನ್ನು ನಾವು ತಿರಸ್ಕರಿಸಿದ್ದೇವೆ ರಾಹುಲ್‌ ಗಾಂಧಿ ನಮ್ಮ ನಾಯಕರಾಗಿಯೇ ಇರಲಿದ್ದಾರೆ ಎಂದು ಹೇಳಿದರು. ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು. ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಅವರ ಹೆಸರೂ ಪ್ರಸ್ತಾಪ ಬೇಡ& ಎಂದು ಸಭೆಯಲ್ಲಿ ಅಧ್ಯಕ್ಷ ರಾಹುಲ್‌ ಗಾಂಧಿ ಇಂಗಿತ ವ್ಯಕ್ತಪಡಿದರು. ಆದರೆ, ಅವರ ಅಭಿಪ್ರಾಯವನ್ನು ಸಭೆಯಲ್ಲಿದ್ದ ನಾಯಕರು ಸರ್ವಾನುಮತದಿಂದ ತಿರಸ್ಕರಿಸಿದ್ದೇವೆ ಎಂದು ಹೇಳಿದರು. ಪಕ್ಷಕ್ಕೆ ರಾಹುಲ್ ಗಾಂಧಿ ಮಾರ್ಗದರ್ಶನ ಅಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು. : ’ . # # #.