ಅಂಗನವಾಡಿ ಮತ್ತು ಅಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್. ನವದೆಹಲಿ,ಫೆಬ್ರವರಿ,1,2024(..):ಅಂಗನವಾಡಿ ಮತ್ತು ಅಶಾ ಕಾರ್ಯಕರ್ತೆಯರಿಗೆ ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಸಿಹಿಸುದ್ದಿ ಸಿಕ್ಕಿದೆ. ಹೌದು, ಆಯುಷ್ಮಾನ್ ಭಾರತ ಯೋಜನೆಯಡಿ ಆರೋಗ್ಯ ವಿಮೆ ರಕ್ಷಣೆಯನ್ನು ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2024-25ನೇ ಸಾಲಿನ ಕೇಂದ್ರದ ಮಧ್ಯಂತರ ಬಜೆಟ್‌ ಅನ್ನು ಮಂಡಿಸಿದರು. ಇದು ನಿರ್ಮಲಾ ಸೀತಾರಾಮನ್ ಅವರ 6ನೇ ಬಜೆಟ್ ಮಂಡನೆಯಾಗಿದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳ 55 ಕೋಟಿ ಜನರು ಈ ಯೋಜನೆಗೆ ಒಳಪಟ್ಟಿದ್ದರು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ವಿಶ್ವದ ಅತಿ ದೊಡ್ಡ ಸಾರ್ವಜನಿಕ ನಿಧಿ ಆಯುಷ್ಮಾನ್ ಭಾರತ ಯೋಜನೆಯಡಿ ಪ್ರತಿ ಕುಟುಂಬಕ್ಕೆ ₹5 ಲಕ್ಷದವರೆಗೆ ಆರೋಗ್ಯ ವಿಮೆಗೆ ಅವಕಾಶವಿದೆ. : - – – - .