2019-20ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ… ಬೆಂಗಳೂರು,ಮೇ,25,2019(..): ಇಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆದಿದ್ದ 2019-20ನೇ ಸಾಲಿನ ಸಿಇಟಿ ಫಲಿತಾಂಶವನ್ನ ಪ್ರಕಟಿಸಲಾಗಿದೆ. ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಂಜಿನಿಯರಿಂಗ್ ಕಾಲೇಜು ಪ್ರವೇಶಕ್ಕೆ ಮುಂದಾಗಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಏ 29 ಹಾಗೂ 30ರಂದು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ಪರೀಕ್ಷೆ ಬರೆದಿದ್ದರು. : # # # #