ಬಿಜೆಪಿ ಮುಖಂಡರನ್ನ ಭೇಟಿಯಾಗಿ ಚರ್ಚಿಸಿದ ‘ಕೈ’ ಶಾಸಕ ರಮೇಶ್ ಜಾರಕಿಹೊಳಿ..? ಬೆಂಗಳೂರು,ಮೇ,25,2019(..): ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದೀಗ ಲೋಕಸಭೆ ಚುನಾವಣೆಯಲ್ಲೊಇ ಬಿಜೆಪಿ ಗೆದ್ದ ಬೆನ್ನಲ್ಲೆ ರಾಜಕೀಯ ಚಟುವಟಿಕೆ ಚುರುಕುಗೊಳಿಸಿದ್ದಾರೆ. ನಿನ್ನೆ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಬಿಜೆಪಿ ನಾಯಕರನ್ನ ಭೇಟಿಯಾಗಿ ಚರ್ಚಿಸಿದ್ದಾರೆ. ಬಿಜೆಪಿ ಮುಖಂಡರಾದ ಸಿಪಿ ಯೋಗೇಶ್ವರ್, ಮಾಲೀಕಯ್ಯ ಗುತ್ತೇದಾರ್, ಬಿಎಸ್ ಯಡಿಯೂರಪ್ಪ ಪಿಎ ಸಂತೋಷ್ ರನ್ನ ಹೋಟೆಲ್ ವೊಂಧರಲ್ಲಿ ಭೇಟಿಯಾಗಿ ಸತತ ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಮೇಶ್ ಜಾಧವ್ ಗೆ ಶುಭಕೋರುವ ನೆಪದಲ್ಲಿ ಬಿಜೆಪಿ ಮುಖಂಡರನ್ನ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದು ಅತೃಪ್ತ ಶಾಸಕರು ಸಂಪರ್ಕಕ್ಕೆ ಸಿಕ್ಕರೇ ಗೋವಾಗೆ ತೆರಳಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕರ ನಡೆಗೆ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ತಮ್ಮ ಜತೆ ಇತರೇ ಅತೃಪ್ತ ಶಾಸಕರನ್ನ ಬಿಜೆಪಿಗೆ ಕರೆದೊಯ್ಯುವ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. : # # #