ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ… ನವದೆಹಲಿ,ಮೇ,23,2019(..): ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಜಯ ಸಾಧಿಸಿದ್ದು, ಚುನಾವಣೆಯಲ್ಲಿ ಯುಪಿಎ ಸೋಲನುಭವಿಸಿದ ಹಿನ್ನೆಲೆ ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಜನರೇ ಮಾಲೀಕರು. ಅವರ ತೀರ್ಪನ್ನ ಸ್ವಾಗತಿಸುತ್ತೇನೆ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲನ್ನ ಸ್ವೀಕರಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದ ಪ್ರಧಾನಿ ಮೋದಿ ಎಂದು ಜನರು ನಿರ್ಧರಿಸಿದ್ದಾರೆ. ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು. ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ಹೋರಾಡುತ್ತೇವೆ. ಸೋಲು ಗೆಲುವು ಸಾಮಾನ್ಯ. ಸೋಲಿಗೆ ಹೆದರುವ ಅಗತ್ಯವಿಲ್ಲ ಹೋರಾಟ ಮುಂದುವರೆಸೋಣ ಎಂದು ರಾಹುಲ್ ಗಾಂಧಿ ಕರೆ ನೀಡಿದರು. : … #election2019 # #